Tuesday, August 2, 2016

ಆಗಸ್ಟ್ 4ರಂದು ರೇಷ್ಮೆ, ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನಸಂಪರ್ಕ ಸಭೆ


ಹಾಸನ, ಆಗಸ್ಟ್ 2-ರಾಜ್ಯ ರೇಷ್ಮೆ ಖಾತೆ ಹಾಗೂ ಪಶುಸಂಗೋಪನಾ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ಆಗಸ್ಟ್ 4ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜನಸಾಮಾನ್ಯರು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಕುಂದುಕೊರತೆಗಳನ್ನು ಆಲಿಸಲಿರುವ ಸಚಿವರು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಚಿವರು ನಡೆಸಲಿರುವ ಜನಸಂಪರ್ಕ ಸಭೆಯಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಸೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಜರಿರಲಿದ್ದಾರೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲು ಸಲ್ಲಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

No comments:

Post a Comment