Tuesday, August 2, 2016

ರೇಷ್ಮೆ, ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ


ಹಾಸನ, ಆಗಸ್ಟ್ 2-ರಾಜ್ಯ ರೇಷ್ಮೆ ಖಾತೆ ಹಾಗೂ ಪಶುಸಂಗೋಪನಾ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ಆಗಸ್ಟ್ 3ರಂದು ಬೆಳಿಗ್ಗೆ 10ಕ್ಕೆ ಹನ್ಯಾಳುನಿಂದ ಅರಕಲಗೂಡಿಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಅರಕಲಗೂಡಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಅರಕಲಗೂಡಿನಿಂದ ಹಾಸನಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಮಾನ್ಯ ಸಚಿವರು ಆಗಸ್ಟ್ 4ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುವರು. ನಂತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.
ಮಾನ್ಯ ಸಚಿವರು ಆಗಸ್ಟ್ 5ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.

No comments:

Post a Comment