Tuesday, August 2, 2016

ಪ್ರಧಾನ ಮಂತ್ರಿ ಸುgಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ

ಹಾಸನÀ ಆಗಸ್ಟ್ 2 : ಸಾರ್ವಜನಿPರು ಪ್ರಧಾನ ಮಂತ್ರಿ ಸುgಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಪ್ರಚಾರ ನೀಡಲು ಕ್ರಮವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿ.ಚೈತ್ರ ಅವರು ಸೂಚನೆ ನೀಡಿದರು.
         ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ(PಒSಒಂ) ಮತ್ತು ರಾಷ್ಟ್ರೀಯ ಜಂತುಹುಳ ನಿವಾರಣ ದಿನ(ಓಆಆ) ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿರು. ಗರ್ಭಿಣಿ ಸ್ತ್ರೀಯರನ್ನು ಗುರುತಿಸಿ ¸ಕಾಲಕ್ಕೆ ಅಗತ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದುವಂತೆ ತಿಳುವಳಿಕೆ ನೀಡುವಂತೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ದೊರಕುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಅರಿವು ಮೂಡಿಸುವಂತೆ ತಿಳಿಸಿದರು.
    ಪ್ರಧಾನ ಮಂತ್ರಿ ಸುgಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ಕುರಿತು ತಾಲ್ಲೂಕು ಕಚೇರಿ, ನಾಡ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬ್ಯಾನರ್ ಹಾಕಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
   ಸರಿಯಾಗಿ ಕಾರ್ಯಕ್ರಮ ಅನುಷ್ಠಾನವಾಗಬೇಕು ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ತಯಾರಿಸಿ ನೀಡುವಂತೆ ತಿಳಿಸಿದರಲ್ಲದೆ, ತಾಲ್ಲೂಕುವಾರು ಸ್ಕ್ಯಾನಿಂಗ್ ಮಾಡುವವರ ವಿವರ ಹಾಗೂ ಕಾರ್ಯಕ್ರಮ ಅನುಷ್ಠಾನ ಕುರಿತು ಮೇಲ್ವಿಚಾರಣೆ ಮಾಡುವವರ ಪಟ್ಟಿಯನ್ನು ನೀಡುವಂತೆ ಸೂಚಿಸಿದರು.
     ಜಂತುಹುಳ ನಿವಾರಣೆ ಕುರಿತು ಪ್ರತಿ ಶಾಲೆಯಲ್ಲಿ ಬ್ಯಾನರ್ ಹಾಕಬೇಕು ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು. ಅಪೌಷ್ಠಿಕತೆಯಿರುವ ಮಕ್ಕಳನ್ನು ಗುರುತಿಸಿ ಪೌಷ್ಠಿಕ ಆಹಾರ ನೀಡಲು ಕ್ರಮವಹಿಸುವಂತೆ ಸೂಚಿಸಿದರು.
    ಜಿಲ್ಲೆಯಲ್ಲಿ 3,88,000 ಮಕ್ಕಳಿಗೆ ಜಂತು ಹುಳು ಮಾತ್ರೆ ನೀಡಲಾಗುವುದು. ಎರಡು ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ 2 ರಿಂದ 19 ವರ್ಷದವರಿಗೆ ಒಂದು ಮಾತ್ರೆ ನೀಡಲಾಗುವುದು ಎಂದು  ಆರ್.ಸಿ.ಹೆಚ್ ಅಧಿಕಾರಿ ಡಾ:ಜನಾರ್ಧನ್ ಸಭೆಗೆ ಮಾಹಿತಿ ನೀಡಿದರು.ಮಹಿಳೆಯರು ಗರ್ಭಿಣಿಯಾಗಿ ಮೊದಲ ಮೂರು ತಿಂಗಳಲ್ಲಿ ಆಸ್ಪತ್ರೆಗೆ ಪರೀಕ್ಷೆಗೆ ಬರೆದೆ ಇರುವವರನ್ನು ಹಾಗೂ ಮೊದಲ ಮೂರನೇ ತಿಂಗಳಲ್ಲಿ ಪರೀಕ್ಷೆಗೆ ಬಂದು ಎರಡು ಮತ್ತು ಮೂರನೇ ತ್ರೈಮಾಸಿಕದಲ್ಲಿ ತಪಾಸಣೆಗೆ ಬರದಿದ್ದವರನ್ನು ಗುರುತಿಸಿ ತಪಾಸuಗೆÉ ಕರೆತರಲು ಆಶಾ ಕಾರ್ಯಕರ್ತೆಯರು ಮತ್ತು ಕಿರಿಯ ಮಹಿಳಾ ಸಹಾಯಕಿಯರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು. ಪ್ರಧಾನ ಮಂತ್ರಿ ಸುgಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮದಡಿಯಲ್ಲಿ  ಪ್ರತಿ ಮಾಹೆಯ 9 ದಿನಾಂಕದÀಂದು ಗರ್ಭಿಣಿ ಸ್ತ್ರೀಯರ ತಪಾÀಸಣೆಯನ್ನು  ಉಚಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.

   ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ:ವೆಂಕಟೇಶ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ:ಶಂಕರ್ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

No comments:

Post a Comment